- Advertisement -
- Advertisement -


ಹಾವೇರಿ: ಆಕಸ್ಮಿಕ ಬೆಂಕಿ ಅವಘಡಕ್ಕೆ ಮನೆಯೊಂದು ಸುಟ್ಟು ಕರಕಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಂದಾಪುರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿವೆ.
ಮನೆಯು ಪರಮೇಶ ಲಮಾಣಿ ಎಂಬುವರಿಗೆ ಸೇರಿದ್ದು, ತಡರಾತ್ರಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಮನೆಯವರು ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆಯುವಾಗ ಮನೆಯವರು ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ತೆರಳಿದ್ದರು. ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -