

ಮುಂಬೈ: ಅಫ್ಘಾನಿಸ್ತಾನ ಬಿಕ್ಕಟ್ಟು ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ ಮಹಿಳೆಯರು ಹಾಗೂ ಅವರ ಸಮುದಾಯದ ರಕ್ಷಣೆಗಾಗಿ ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದಿದ್ದಾರೆ.

ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಓವೈಸಿ, ದೇಶದಲ್ಲಿ ಒಂಬತ್ತು ಹೆಣ್ಣು ಮಕ್ಕಳ ಪೈಕಿ ಒಂದು ಐದು ರ‍್ಷಕ್ಕಿಂತ ಮುಂಚಿತವಾಗಿಯೇ ಸಾವನ್ನಪ್ಪುತ್ತಿದೆ ಎಂಬ ವರದಿಯನ್ನೊಂದನ್ನು ಉಲ್ಲೇಖಿಸಿ, ಇಲ್ಲಿಯೇ ಮಹಿಳೆಯರ ಮೇಲೆ ದರ‍್ಜನ್ಯ, ಅಪರಾಧಗಳು ನಡೆಯುತ್ತಿರುವಾಗ, ಕೇಂದ್ರ ರ‍್ಕಾರ ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಮೇಲೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಚಿಂತೆ ಮಾಡುತ್ತಿದೆ. ಇಲ್ಲಿ ಅದು ನಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮುಸ್ಲಿಂ ಮಹಿಳೆಯರು ಮತ್ತು ಅವರ ಸಮುದಾಯದವರ ರಕ್ಷಣೆಗಾಗಿ ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದು ಸಲಹೆ ನೀಡಿದರು.













