Tuesday, August 11, 2026
spot_imgspot_img
spot_imgspot_img

ಅ.15 ಇಡ್ಕಿದು ಗ್ರಾಮ ಪಂಚಾಯತ್‌ ಹಾಗೂ ಮೆಸ್ಕಾಂ ಇಲಾಖೆ ವಿಟ್ಲ ಇದರ ಸಹಯೋಗದೊಂದಿಗೆ 2022-23ನೇ ಸಾಲಿನ “ವಿದ್ಯುತ್‌ ಅದಾಲತ್”

- Advertisement -
- Advertisement -

ಇಡ್ಕಿದು ಗ್ರಾಮ ಪಂಚಾಯತ್‌ ಹಾಗೂ ಮೆಸ್ಕಾಂ ಇಲಾಖೆ ವಿಟ್ಲ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ಇಡ್ಕಿದು ಮತ್ತು ಕುಳ ಗ್ರಾಮದಲ್ಲಿನ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ “ವಿದ್ಯುತ್‌ ಅದಾಲತ್” ಕಾರ್ಯಕ್ರಮವು ಅ.15ರ ಶನಿವಾರದಂದು ಪೂರ್ವಾಹ್ನ 11.30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ. ಸುಧೀರ್‌ ಕುಮಾರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಆದ್ದರಿಂದ ಇಡ್ಕಿದು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಎಲ್ಲಾ ಗ್ರಾಮಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು ಈ ವಿದ್ಯುತ್ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!