Monday, February 10, 2025
spot_imgspot_img
spot_imgspot_img

ಆಸ್ತಿ ಕಲಹ: ಸಹೋದರನ ಹತ್ಯೆಗೈದು ಅಣ್ಣ ಪರಾರಿ

- Advertisement -
- Advertisement -

ಅಣ್ಣ – ತಮ್ಮಂದಿರ ನಡುವೆ ನಡೆಯುತ್ತಿದ್ದ ಆಸ್ತಿ ಕಲಹ ವಿಕೋಪಕ್ಕೆ ತಿರುಗಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿಯಲ್ಲಿ ನಡೆದಿದೆ.

ಗೋವಿಂದ ಮೃತಪಟ್ಟ ದುರ್ದೈವಿಯಾಗಿದ್ದು, ಆತನನ್ನು ಮಾರಣಾಂತಿಕವಾಗಿ ಥಳಿಸಿದ್ದ ಸಹೋದರ ರಂಗಸ್ವಾಮಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಗೋವಿಂದನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡ ಕವಲಂದೆ ಪೊಲೀಸರು ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!