Friday, December 3, 2021
spot_imgspot_img
spot_imgspot_img

ಆಸ್ತಿ ವಿಚಾರಕ್ಕೆ ವಾಗ್ವಾದ; ಸುಪಾರಿ ನೀಡಿ ತಾಯಿಯನ್ನೇ ಕೊಂದ ಪುತ್ರ!

- Advertisement -
- Advertisement -

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೊಲೆಯಾದ ಮಹಿಳೆ ನಳಿನಿ(55) ಎನ್ನಲಾಗಿದೆ.

ಮನೆಗೆ ನುಗ್ಗಿ ಕತ್ತು ಕೊಯ್ದು ಮಹಿಳೆಯನ್ನು ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಆಸ್ತಿ ವಿವಾದಕ್ಕೆ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ಮಾಡಿಸಿದ್ದಾನೆ. ತಾಯಿ ಕೊಲೆಗೆ ಪುತ್ರ 5 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದಾನೆ ಎಂದು ಪೊಲೀಸರ ಮುಂದೆ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಆಂಧ್ರಪ್ರದೇಶದ ವಿಜಯವಾಡದ ಮುಕೇಶ್ ಹಾಗೂ ಹರಿ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

driving
- Advertisement -

Related news

error: Content is protected !!