Sunday, August 9, 2026
spot_imgspot_img
spot_imgspot_img

ಇಂದು ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿ ಸಹಿತ ಗಣ್ಯರು ಭಾಗಿ

- Advertisement -
- Advertisement -

ಲಖನೌ: ಸತತ ಎರಡನೇ ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಯೋಗಿ ಆದಿತ್ಯನಾಥ್ ಅವರು ಜಯ ಗಳಿಸಿದ್ದರು. ಆ ಮೂಲಕ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಲು ಸಜ್ಜಾಗಿದ್ದರು. ಇದೀಗ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ನಡೆಯಲಿದ್ದು, ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ರಾಜ್ಯವನ್ನು ಮುನ್ನಡೆಸಲು ತಯಾರಾಗಿದ್ದಾರೆ.

vtv vitla
vtv vitla

ಲಖನೌದಲ್ಲಿರುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖೇಶ್ ಅಂಬಾನಿ ಸೇರಿದಂತೆ ಹಲವು ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಇದಲ್ಲದೆ ಯೋಗ ಗುರು ಬಾಬಾ ರಾಮ್ ದೇವ್, ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಬಾಲಿವುಡ್ ತಾರೆಗಳಾದ ಅನುಪಮ್ ಖೇರ್, ಅಕ್ಷಯ್ ಕುಮಾರ್, ಕಂಗನಾ ರಾಣಾವತ್, ಬೋನಿ ಕಪೂರ್ ಮತ್ತಿತರರಿಗೂ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

50 ಸಾವಿರ ಜನರು ಕುಳಿತುಕೊಳ್ಳಬಹುದಾದ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಉಗ್ರ ನಿಗ್ರಹ ಪಡೆ, ವಿಶೇಷ ಕಾರ್ಯಪಡೆ ಸಿಬ್ಬಂದಿ ಸೇರಿದಂತೆ ಸುಮಾರು 8 ಸಾವಿರ ಪೊಲೀಸರನ್ನು ಭದ್ರತಾ ದೃಷ್ಟಿಯಿಂದ ನಿಯೋಜನೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!