Friday, August 7, 2026
spot_imgspot_img
spot_imgspot_img

ಇಡ್ಕಿದು ಹರೀಶ್ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಗಾಣಿಗರ ಸಂಘದಿಂದ ಪೊಲೀಸರಿಗೆ ಮನವಿ

- Advertisement -
- Advertisement -

ಪುತ್ತೂರು: ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಂಟ್ವಾಳ ಇಡ್ಕಿದು ನಿವಾಸಿ, ಪೈಂಟರ್ ಹರೀಶ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ತಾಲೂಕು ಸಪಲಿಗರ ಯಾನೆ ಗಾಣಿಗರ ಸಂಘ ಉಪ್ಪಿನಂಗಡಿ ಘಟಕದ ಸದಸ್ಯರು, ಪುತ್ತೂರು ವಲಯ ಮಟ್ಟದ ಸಮಿತಿ ಸದಸ್ಯರು ನ.21ರಂದು ನಗರ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರು.

ಮೃತ ಹರೀಶ್‌ ಪುತ್ತೂರಿನ ಕಟ್ಟಡವೊಂದರಲ್ಲಿ ವಾಹನಗಳ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬವರು ಹರೀಶ್‌ರವರಿಗೆ ಸುಮಾರು ಒಂದು ತಿಂಗಳಿನಿಂದ ವಿನಾಃ ಕಾರಣ ಬೈಯ್ಯುವುದು ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ.

ಕೆಲ ದಿನಗಳ ಹಿಂದೆ ಹರೀಶ್‌ ಅವರಿಗೆ ಆರೋಪಿಯು ಹಲ್ಲೆ ಮಾಡಿ, ತಲ್ವಾರು ಹಿಡಿದು ಜೀವ ಬೆದರಿಕೆ ಹಾಕಿದ್ದರಿಂದ ಮನನೊಂದು ಹರೀಶ್ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಪುತ್ತೂರು ವಲಯ ಮಟ್ಟದ ಸಮಿತಿ ಅಧ್ಯಕ್ಷ ಲಕ್ಷ್ಮೀಪ್ರಸಾದ್ ಬೆಟ್ಟ , ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ತಾಲೂಕು ಸಮಿತಿ ಸದಸ್ಯರಾದ ಮೋಹನ್ ನಗರ, ಪ್ರಶಾಂತ್ ಮುರ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!