Thursday, October 10, 2024
spot_imgspot_img
spot_imgspot_img

ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಶಿಕ್ಷಕ

- Advertisement -
- Advertisement -

ಉಡುಪಿ: ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ.

ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಎಂಬಾತ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದಾರೆ. ಗ್ರಾಮದ ಶಾಲೆಯ ಮಕ್ಕ ಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಇಂತಹ ಕಾರ್ಯವನ್ನು ನಡೆಸಿದ್ದು , ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ ಉಪಾಧ್ಯಕ್ಷೆ ಚೇತನಾ ಶೆಟ್ಟಿ, ಪಂಚಾಯಿತಿ ಸದಸ್ಯರಾದ ಕೆ. ತುಕಾರಾಮ ನಾಯಕ್, ರಮೇಶ್ ಪೂಜಾರಿ ಶಾಲಾಭಿವೃದ್ಧಿ ಸಮಿತಿ, ಬೈದಷ್ರಿ ಫ್ರೆಂಡ್ಸ್ ನ ಸತೀಶ್, ಗ್ರಾಮಸ್ಥರು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದು , ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವಿ ಸಲ್ಲಿ ಸಿದ್ದಾರೆ.

ಸದ್ಯ ಶಿಕ್ಷಕನ ಈ ವಿಡಿಯೋ ಈ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!