- Advertisement -




- Advertisement -
ಉಡುಪಿ : ಉಡುಪಿ ನಗರದ ಕುಂಜಿಬೆಟ್ಟಿನ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳತನದ ಬಗ್ಗೆ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ.ಕೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅ.29 ಹಾಗೂ 30 ರ ನಡುವಿನ ಅವಧಿಯಲ್ಲಿ ಕಾಲೇಜಿನ ರೂಮ್ ಬೀಗವನ್ನು ಒಡೆದು ಒಳ ನುಗ್ಗಿದ ಕಳ್ಳರು 2 ಲ್ಯಾಪ್ ಟಾಪ್ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಲ್ಯಾಪ್ ಟಾಪ್ಗಳ ಮೌಲ್ಯ 50,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.



- Advertisement -