Wednesday, June 24, 2026
spot_imgspot_img
spot_imgspot_img

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಸಿಬ್ಬಂದಿಗಳ ನಡುವೆ ಹೊಡೆದಾಟ, ಚೂರಿ ಇರಿತ..!

- Advertisement -
- Advertisement -
suvarna gold

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಸಮೀಪ ಹೋಟೆಲ್ ಸಿಬ್ಬಂದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವ ಸಿಬ್ಬಂದಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.

ಸತೀಶ ಹಾಗೂ ರಜಾಕ್ ಉಡುಪಿಯ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್ ಸಮೀಪದ ಹೋಟೆಲ್ ವೊಂದರಲ್ಲಿ ಕೆಲಸಗಾರರಾಗಿದ್ದು ಸತೀಶ ಹಾಗೂ ರಜಾಕ್ ಎಂಬವರು ದೂಡಾಡಿಕೊಂಡು ಗಲಾಟೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ರಜಾಕ್ ಸತೀಶನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಹಾಗೂ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವುದಾಗಿ ಕಾರ್ಕಳದ ಭಜಗೋಳಿಯ ಸತೀಶ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!