- Advertisement -
- Advertisement -


ಉಡುಪಿ : ದೈವಸ್ಥಾನಕ್ಕೆ ನುಗ್ಗಿ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ.
ಬ್ರಹ್ಮ ಗಿರಿಯ ಪ್ರಶ್ನೆ ರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣದಲ್ಲಿರುವ ದೈವದ ಮನೆಯ ಬಾಗಿಲು ಚಿಲಕವನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು, 51 ಸಾವಿರ ರೂ. ಮೌಲ್ಯದ ದೈವದ ಪಂಚಲೋಹದ ಹಾಗೂ ಹಿತ್ತಾಳೆಯ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -