Sunday, October 1, 2023
spot_imgspot_img
spot_imgspot_img

ಉಡುಪಿ: ನಿಷೇಧಿತ ಪ್ಲಾಸ್ಟಿಕ್ ವಶ

- Advertisement -G L Acharya panikkar
- Advertisement -

ಉಡುಪಿ: ಉಡುಪಿ ನಗರ ಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ ಬಳಿ ಅಂಗಡಿಗಳಿಗೆ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಇಕ್ಬಾಲ್‌ ಎಂಬಾತನ ವಾಹನದ ಮೇಲೆ ಇಂದು ನಗರಸಭೆ ಆರೋಗ್ಯ ಶಾಖೆಯ ಅಧಿಕಾರಿಗಳು ದಾಳಿ ನಡೆಸಿ, 75 ಕೆಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಆತನಿಗೆ 5 ಸಾವಿರ ರೂ. ದಂಡ ವಿಧಿಸಲಾಗಿದೆ.

ಕಾರ್ಯಾಚರಣೆಯಲ್ಲಿ ನಗರ ಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್ ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.

ಸಾರ್ವಜನಿಕರು, ಉದ್ದಿಮೆದಾರರು ಹಾಗೂ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಇದೇ ವೇಳೆ ತಿಳಿಸಿದ್ದಾರೆ.

- Advertisement -

Related news

error: Content is protected !!