Thursday, June 25, 2026
spot_imgspot_img
spot_imgspot_img

ಉಡುಪಿ: ಶಿರೂರು ಟೋಲ್ ಕಂಬಕ್ಕೆ ಅಂಬ್ಯುಲೆನ್ಸ್ ಡಿಕ್ಕಿ; ಮೂವರು ಸಾವು, ಓರ್ವ ಗಂಭೀರ..!

- Advertisement -
- Advertisement -

ಉಡುಪಿ: ವೇಗವಾಗಿ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ.

ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಶಿರೂರು ಟೋಲ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ. ಆಂಬ್ಯುಲೆನ್ಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!