Sunday, August 14, 2022
spot_imgspot_img
spot_imgspot_img

ಉಪ್ಪಿಟ್ಟುವಿನಲ್ಲಿ ಹಾವಿನ ಮರಿ ಪತ್ತೆ; 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲು!

- Advertisement -G L Acharya G L Acharya
vtv vitla
vtv vitla
vtv vitla
- Advertisement -

ಯಾದಗಿರಿ: ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿನ ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು, ಈ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರಿನಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದು, ಈ ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

vtv vitla
vtv vitla

ಸದ್ಯ ಜಿಲ್ಲಾಸ್ಪತ್ರೆಗೆ ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಭೇಟಿ ನೀಡಿದ್ದಾರೆ. ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಎಲ್ಲಾ ಮಕ್ಕಳನ್ನ ಶಾಸಕ ಮುದ್ನಾಳ್ ಭೇಟಿಯಾಗಿದ್ದಾರೆ.

vtv vitla
- Advertisement -

Related news

error: Content is protected !!