Monday, September 21, 2026
spot_imgspot_img
spot_imgspot_img

ಉಳ್ಳಾಲ: ಆರ್ಥಿಕ ಮುಗ್ಗಟ್ಟಿನ ಶಂಕೆ; ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಉಳ್ಳಾಲ: ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್ 16ರ ಗುರುವಾರ ಸಂಜೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹರ್ದೀಪ್ (20) ಎಂದು ಗುರುತಿಸಲಾಗಿದೆ. ಬಗಂಬಿಲದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಈತ ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!