Thursday, July 3, 2025
spot_imgspot_img
spot_imgspot_img

‘ಎಲ್ಲಾ ಪ್ರಾದೇಶಿಕ ಭಾಷೆಗಳೂ ಗೌರವಕ್ಕೆ ಅರ್ಹವಾದವು’-ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ನವದೆಹಲಿ: ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳೂ ಗೌರವಕ್ಕೆ ಅರ್ಹವಾದವು. ದೇಶದ ಸಂಸ್ಕೃತಿಯ ಪ್ರತಿಫಲನ ಪ್ರತಿಯೊಂದು ಭಾಷೆಯಲ್ಲೂ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾಷಾ ವಿಚಾರವಾಗಿ ವಿವಾದ ಸೃಷ್ಟಿಸುವವರಿಗೆ ಎಚ್ಚರಿಕೆ ನೀಡಿರುವ ಮೋದಿ, ಬಿಜೆಪಿಯು ಎಲ್ಲಾ ಭಾಷೆಗಳಿಗೆ ಪೂಜನೀಯ ಸ್ಥಾನ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಲ್ಲಾ ಭಾಷೆಗಳಿಗೂ ಆದ್ಯತೆ ನೀಡುವ ಮೂಲಕ ಪ್ರತಿ ಭಾಷೆಗೂ ಗೌರವ ನೀಡಲಾಗಿದೆ ಎಂದರು.

ಈ ವರ್ಷದ ಕೊನೆಯಲ್ಲಿ ಮತ್ತು ಮುಂದಿನ ವರ್ಷದ ಆರಂಭದಲ್ಲಿ ಕರ್ನಾಟಕ, ಗುಜರಾತ್‌ ಸೇರಿದಂತೆ ವಿವಿಧ ರಾಜ್ಯಗಳಲ್ಲಿವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರತಿ ಕಾರ್ಯಕರ್ತನೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಜನಮನಕ್ಕೆ ತಲುಪಿಸಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಅಲ್ಲದೆ ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹರೆಲ್ಲರೂ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

- Advertisement -

Related news

error: Content is protected !!