Sunday, August 30, 2026
spot_imgspot_img
spot_imgspot_img

ಎಸಿ ಸ್ಫೋಟಗೊಂಡು ಸ್ಥಳದಲ್ಲೇ ಒಂದೇ ಮನೆಯ ನಾಲ್ವರು ಸಾವು

- Advertisement -
- Advertisement -

ವಿಜಯನಗರ: ಎಸಿ ಸ್ಫೋಟಗೊಂಡು ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮ್ಮನಹಳ್ಳಿಯ ರಾಘವೇಂದ್ರಶೆಟ್ಟಿ ಮನೆಯಲ್ಲಿ ನಡೆದಿದೆ. ಎಸಿ ಸ್ಫೋಟದಿಂದ ಮನೆಯಲ್ಲಿದ್ದ ಪತಿ, ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಶಾರ್ಟ್‌ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡು ದುರ್ಘಟನೆ ನಡೆದಿದೆ ಎನ್ನಲಾಗಿದೆ.

ವೆಂಕಟ್ ಪ್ರಶಾಂತ್(42), ಪತ್ನಿ ಡಿ.ಚಂದ್ರಕಲಾ(38), ಮಕ್ಕಳಾದ H.A.ಅರ್ದ್ವಿಕ್(16), ಪ್ರೇರಣಾ(8) ಮೃತರು. ಶಾರ್ಟ್‌ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ಎಸಿ ಸ್ಫೋಟಗೊಂಡು ಇಡೀ ಮನೆ ಧಗಧಗನೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!