- Advertisement -




- Advertisement -
ಕಡಬ: ಟ್ಯೂಷನ್‌ಗೆಂದು ಮನೆಯಿಂದ ತೆರಳಿ ನಾಪತ್ತೆಯಾದ ವಿದ್ಯಾರ್ಥಿಯ ಶವ ನಾಕೂರು ಗಯದ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.

ಕೋಡಿಂಬಾಳ ಗ್ರಾಮದ ಮಂಜುನಾಥ ಎಂಬವರ ಪುತ್ರ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ ಮೃತ ಬಾಲಕ. ಮಾ.29 ರಂದು ಟ್ಯೂಷನ್‌ಗೆಂದು ತೆರಳಿ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದ. ಕುಟುಂಬಸ್ಥರು ಮತ್ತು ಊರವರು ಸೇರಿ ಹುಡುಕಾಟ ನಡೆಸಿದ್ದಾಗ ಬಾಲಕನ ಬ್ಯಾಗ್, ಐಡಿ ಕಾರ್ಡ್ ನಾಕೂರು ಗಯದ ಕುಮಾರಧಾರ ನದಿಯಲ್ಲಿ ಇಂದು ಮುಂಜಾನೆ ಪತ್ತೆಯಾಗಿದೆ.
ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ನದಿಯಲ್ಲಿ ಹುಡುಕಾಟ ಆರಂಭಿದ್ದರು. ಇದೀಗ ಮೃತ ಶರೀರ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭಿಸಲಿದೆ.
- Advertisement -