- Advertisement -
- Advertisement -
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ಕನ್ನಡಿಗರಾದ ಮೋಹನ್ ಮಲ್ಲಿಕಾರ್ಜುನಗೌಡ ಶಾಂತನಗೌಡರ್ (61) ಶನಿವಾರ ರಾತ್ರಿ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸುಪ್ರೀಂ ಕೋರ್ಟ್ನ ಸಹಾಯಕ ರಿಜಿಸ್ಟ್ರಾರ್ ಗಗನ್ ಸೋನಿ, ಶಾಂತನಗೌಡರ್ ರವರು ಕೆಲವು ಸಮಯಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೋಹನ್ ಶಾಂತನಗೌಡರ್, 1958ರ ಮೇ 5ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಜನಿಸಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲದಿಂದ ಕಾನೂನು ಪದವಿ ಪಡೆದಿದ್ದರು.

ಶಾಂತನಗೌಡರ್ ಅವರು 2016 ರಿಂದ ಒಂದು ವರ್ಷ ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಅವರ ಸೇವಾ ಅವಧಿ 2023ರ ಮೇ 4ರವರೆಗೆ ಇತ್ತು.

- Advertisement -








