Thursday, December 5, 2024
spot_imgspot_img
spot_imgspot_img

ಕಮಲ ತೆಕ್ಕೆಗೆ ಪೈಲ್ವಾನ್ ಬಲ..!?? ಎಲ್ಲರ ಚಿತ್ತ ಮಧ್ಯಾಹ್ನದ ಸುದ್ದಿಗೋಷ್ಠಿಯತ್ತ..!

- Advertisement -
- Advertisement -

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿಗೆ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ನಟ ಸುದೀಪ್ ಬಿಜೆಪಿ ಸೇರುವ ಇಂದು (ಬುಧವಾರ) ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಶೋಕ್ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ ಅಂತ ತಿಳಿದು ಬಂದಿದೆ. ಮಧ್ಯಾಹ್ನ 1.30 ಕ್ಕೆ ಸುದ್ದಿಗೋಷ್ಠಿ ನಡೆಯಲಿದ್ದು ಸುದೀಪ್ ಪಕ್ಷಕ್ಕೆ ಸೇರುತ್ತಾರಾ ಎಂಬ ಪ್ರಶ್ನೆಗೆ ತೆರೆ ಬೀಳಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಟ ಕಿಚ್ಚ ಸುದೀಪ್‌ ‌ಬಿಜೆಪಿಗೆ ಸೇರಲಿದ್ದಾರೆಯೇ ಅಥವಾ ಬಿಜೆಪಿ ಪರ ಪ್ರಚಾರದ ಸ್ಟಾರ್ ಕ್ಯಾಂಪೇನ್ ಕೂಡ ಆಗಲಿದ್ದಾರಾ ಎಂದು ಕೋಟ್ಯಾಂತರ ಅಭಿಮಾನಿಗಳು ಕುತೂಹಲದಿಂದ ಎದುರುನೋಡುತ್ತಿದ್ದಾರೆ.

ನಾಳೆ ಮಧ್ಯಾಹ್ನ 1-30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಬರು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಚುನಾವಣಾ ಪ್ರಚಾರ ಕುರಿತಾದ ಧ್ವನಿ ಸುರುಳಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಧ್ವನಿ ಸುರಳಿ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಸುದೀಪ್‌ಗೆ ಆಹ್ವಾನನಾ?, ಅಥವಾ ಸುದೀಪ್‌ ಅವರು ಬಿಜೆಪಿ ಸೇರುವ ಬಗ್ಗೆ ಪತ್ರಿಕಾಗೋಷ್ಠಿನಾ? ಎಂಬುದರ ಬಗ್ಗೆ ಇಂದು ಮಧ್ಯಾಹ್ನದ ಹೊತ್ತಲ್ಲಿ ಉತ್ತರ ಸಿಗಲಿದೆ.

ನಗರದ ಕ್ಯಾಪಿಟಲ್ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಸಿಎಂ ಜೊತೆಗೆ ವೇದಿಕೆ ಸುದೀಪ್ ಹಂಚಿಕೊಳ್ಳಲಿದ್ದಾರೆ. ಆದರೆ ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ಇನ್ನೂ ಅಂತಿಮವಾಗಿಲ್ಲ. ಸುದೀಪ್ ಪಕ್ಷಕ್ಕೆ ಕರೆ ತರಲು ತೆರೆಮರೆಯಲ್ಲಿ ಸಚಿವರಾದಿಯಾಗಿ ಹಲವು ನಾಯಕರ ಚರ್ಚೆ ನಡೆಸಿದ್ದಾರೆ. ಈಗಾಗಲೇ ಬಿಜೆಪಿ ನಾಯಕರು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪಕ್ಷ ಸೇರ್ಪಡೆ ಬಗ್ಗೆ ಸುದೀಪ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಪ್ರಯತ್ನ ಮುಂದುವರಿದಿದೆ ಅಂತ ಹೇಳಲಾಗುತ್ತಿದೆ.

- Advertisement -

Related news

error: Content is protected !!