Friday, March 21, 2025
spot_imgspot_img
spot_imgspot_img

ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

- Advertisement -
- Advertisement -

ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ . ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬಲವಾದ ಗಾಳಿಯೂ ಬೀಸುತ್ತಿದೆ. ಇದರಿಂದ ತಾಪಮಾನದಲ್ಲಿ ಏರಿಕೆಯೂ ಆಗಿದೆ. ತಾಪಮಾನದಲ್ಲಿ ನಿರಂತರ ಏರಿಕೆಯ ಪರಿಣಾಮ ಬಿಸಿಗಾಳಿ ಸೃಷ್ಟಿಯಾಗಲಿದೆ. ಹಾಗಾಗಿ ಹಿಟ್‌ಸ್ಟ್ರೋಕ್, ಕಣ್ಣಿನ ಉರಿ, ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೋರುವ ಅಪಾಯವಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!