Monday, August 3, 2026
spot_imgspot_img
spot_imgspot_img

ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಣೆ.!

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಒಂದು ವಾರ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ನಗರದಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಒಂದು ಡಿಗ್ರಿ ಹೆಚ್ಚಿತ್ತು.

- Advertisement -

Related news

error: Content is protected !!