Friday, December 3, 2021
spot_imgspot_img
spot_imgspot_img

ಕರ್ತವ್ಯ ನಿರತ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ – ಮೂವರು ಆರೋಪಿಗಳನ್ನು ಬಂಧಿಸಿದ ಪೋಲಿಸರು!

- Advertisement -
- Advertisement -

ಮಂಗಳೂರು: ಮಂಗಳೂರು ನಗರದ ನ್ಯೂಚಿತ್ರಾ ಜಂಕ್ಷನ್ ಬಳಿ ಕರ್ತವ್ಯ ನಿರತರಾಗಿದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಇಬ್ರಾಹಿಂ ಶಾಕೀರ್ (19) , ಅಕ್ಬರ್, (30), ಮಹಮ್ಮದ್ ಹನೀಫ್ ಯಾನೆ ಕರ್ಚಿ ಹನೀಫ್ (32) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಮಂಗಳೂರು ನಗರ ಪೊಲೀಸ್ ವತಿಯಿಂದ ದಸ್ತಗಿರಿ ಮಾಡಲಾಗಿದ್ದು, ಈ ಪ್ರಕರಣದಲ್ಲಿ ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರಾದ ಹರಿರಾಮ್ ಶಂಕರ್ ಐ.ಪಿ. ಎಸ್ ಮತ್ತು ವಿನಯ್ ಗಾಂವ್ಕರ್ ರವರ ನಿರ್ದೇಶನದಂತೆ ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಜಗದೀಶ್ ಮಾರ್ಗದರ್ಶನದಂತೆ ಸವಿತೃ ತೇಜ ಪಿ ಡಿ ಹಾಗೂ ಸಿಬ್ಬಂದಿಗಳು ಮತ್ತು ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಗೋವಿಂದ ರಾಜು ಹಾಗೂ ಸಿಬ್ಬಂದಿಗಳು ಹಾಗೂ ಸಿಸಿಬಿ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!