Friday, April 19, 2024
spot_imgspot_img
spot_imgspot_img

ಕಲಬುರ್ಗಿಯಲ್ಲಿ ಯುವಕನನ್ನು ಇರಿದು ಕೊಲೆ

- Advertisement -G L Acharya panikkar
- Advertisement -

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಪ್ರೀತಂ ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈತ ಅನ್ಯ ಧರ್ಮದ ಯುವತಿಯನ್ನು ವಿವಾಹವಾಗಿದ್ದಾನೆ ಎನ್ನಲಾಗಿದ್ದು, ಕೊಲೆಗೆ ಇದೇ ಕಾರಣ ಎಂಬ ಬಗ್ಗೆ ಕೂಡ ಮಾತು ಸಾರ್ವಜನಿಕ ವಲಯದ ಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!