Thursday, August 6, 2026
spot_imgspot_img
spot_imgspot_img

ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

- Advertisement -
- Advertisement -
driving

ಮಂಗಳೂರು: ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಪತ್ತೆಯಾಗಿರುವ ಮಕ್ಕಳು.

ಬೆಂಗಳೂರಿನ ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟ್‌ನ ನಾಲ್ವರು ಮಕ್ಕಳು ಪತ್ತೆಯಾಗಿದ್ದು, ಸದ್ಯ ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಗರದಲ್ಲಿದ್ದ ಮಕ್ಕಳನ್ನು ರಿಕ್ಷಾ ಚಾಲಕರು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು.

ಇನ್ನು, ಸೋಲದೇವನಹಳ್ಳಿಯ ನಾಲ್ವರು ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಾಹಿತಿಗಳು ಲಭ್ಯವಾಗಿದೆ. ನಾಪತ್ತೆಯಾಗಿರುವ ಮಕ್ಕಳಿಗೆ ಆನ್​​ಲೈನ್​ ಗೇಮ್​​ನ ಹುಚ್ಚು ಇತ್ತು ಎಂದು ತಿಳಿದುಬಂದಿದೆ. ‘ಮೈ‌ನ್​ಕ್ರಾಫ್ಟ್‌’ ಎಂಬ ಆನ್‌ಲೈನ್ ಗೇಮ್ ಆಡ್ತಿದ್ದ ಮಕ್ಕಳು, ಆನ್‌ಲೈನ್‌ ಗೇಮ್‌ನಿಂದ ಪ್ರೇರೇಪಣೆಗೊಂಡು ಮನೆ ಬಿಟ್ರಾ? ಎಂಬ ಪ್ರಶ್ನೆಯೂ ಕೇಳಿಬಂದಿದೆ. ಮೈನ್​ಕ್ರಾಫ್ಟ್ ಗೇಮ್‌ನಿಂದ ಮಕ್ಕಳು ಮನೆ ತೊರೆದ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!