Monday, June 22, 2026
spot_imgspot_img
spot_imgspot_img

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಬಂಧನಕ್ಕೆ ವಾರಂಟ್; ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ

- Advertisement -
- Advertisement -

ಕಾರ್ಕಳ: ಇಬ್ಬರು ನಕ್ಸಲ್‌ವಾದಿಗಳ ಪತ್ತೆಗಾಗಿ ವಿಶೇಷ ನ್ಯಾಯಾಲಯವು ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ.10 ಲಕ್ಷ ಬಹುಮಾನ ಘೋಷಿಸಿದೆ.

ತಲೆ ಮರೆಸಿಕೊಂಡಿರುವ ಆರೋಪಿತರು ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಅಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ ಅಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ಎನ್ನಲಾಗಿದೆ.

ಪಶ್ಚಿಮಘಟ್ಟದಲ್ಲಿ ನಡೆಯುತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರು ಸಕ್ರಿಯಾರಾಗಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಕರ್ನಾಟಕ ಪೊಲೀಸರು ಇವರ ಪತ್ತೆಗಾಗಿ ಬಹುಮಾನ ಘೋಷಿಸಿತ್ತು. ನ್ಯಾಶನಲ್ ಇನ್‌ವೆಸ್ಟಿಗೇಶನ್ ಏಜೆನ್ಸಿ ಹೌಸ್ ನಂಬ್ರ 28/443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿರಿಸಲಾಗುವುದೆಂದು ತಿಳಿಸಲಾಗಿದೆ.

- Advertisement -

Related news

error: Content is protected !!