Friday, August 19, 2022
spot_imgspot_img
spot_imgspot_img

ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ನಾಲ್ವರು ಸಾವು, ಇಬ್ಬರು ಗಂಭೀರ

- Advertisement -G L Acharya G L Acharya
- Advertisement -

ಹರಿಯಾಣ: ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಹರಿಯಾಣದ ಬಹದ್ದೂರ್‌ ಗಢದಲ್ಲಿ ಬುಧವಾರ ನಡೆದಿದೆ.

ಕಾರ್ಮಿಕರು 5 ಅಡಿ ಆಳದ ಟ್ಯಾಂಕ್‌ ಸ್ವಚ್ಛಗೊಳಿಸಲು ಇಳಿದಿದ್ದರು. ಈ ವೇಳೆ ಅನಿಲ ಸೋರಿಕೆಯಾಗಿ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ವಾಸಿಂ ಅಕ್ರಂ ಸಹಿತ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಶಕ್ತಿ ಸಿಂಗ್ ತಿಳಿಸಿದ್ದಾರೆ.

- Advertisement -

Related news

error: Content is protected !!