Monday, June 30, 2025
spot_imgspot_img
spot_imgspot_img

ಕಾಸರಗೋಡು: ಒಳಉಡುಪಿನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಯುವತಿ ಅರೆಸ್ಟ್‌

- Advertisement -
- Advertisement -
vtv vitla

ಕಾಸರಗೋಡು : ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಬಂಧಿತಳನ್ನು ಕಾಸರಗೋಡು ಮೂಲದ ಶಹಲಾ (19) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಳು. ಆದರೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ. ಹಲವು ಸಮಯ ಯುವತಿಯನ್ನು ವಿಚಾರಣೆಗೊಳಪಡಿಸಿದರೂ ಸ್ಪಷ್ಟ ಉತ್ತರ ನೀಡಲಿಲ್ಲ. ಲಗೇಜ್ ತಪಾಸಣೆ ನಡೆಸಿದರೂ ಚಿನ್ನಾಭರಣ ಪತ್ತೆಯಾಗಲಿಲ್ಲ. ಕೊನೆಗೆ ದೇಹ ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

ಇನ್ನು ಯುವತಿಯಿಂದ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

- Advertisement -

Related news

error: Content is protected !!