- Advertisement -
- Advertisement -


ಕಾಸರಗೋಡು: ಗಾಂಜಾ ಹಾಗೂ ಎಂಡಿಎಂಎ ಮಾದಕ ವಸ್ತು ಸಹಿತ ವ್ಯಕ್ತಿಯೋರ್ವನನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಬಣೂರು ನಿವಾಸಿ ಅಬ್ದುಲ್ ಅಮೀರ್ (35) ಎಂದು ಗುರುತಿಸಲಾಗಿದೆ.
ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಬಂದ್ಯೋಡು ಮುಟ್ಟಂ ಸಮೀಪ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದಾರೆ. ಬಂಧಿತನಿಂದ 347 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ಮತ್ತು ಹತ್ತು ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.



- Advertisement -








