- Advertisement -




- Advertisement -
ಕಾಸರಗೋಡು: ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಟತುಕ್ಕ ಎಂಬಲ್ಲಿನ ವಿದ್ಯಾರ್ಥಿನಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬೆಡಕಂ ಪೊಲೀಸರು ಉಮೇಶ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಟತುಕ್ಕ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮಳಮಕುಂದ ಇಲ್ಲತಿಂಗಲ್ ವಿ. ಸೂರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೈಬರ್ ಸೆಲ್ ಸಹಾಯದಿಂದ ನಡೆಸಿದ ತನಿಖೆಯ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಬಂಧಿಸಲಾಗಿದೆ. ಕಾಸರಗೋಡು ಜ್ಯುಡಿಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -