Monday, June 8, 2026
spot_imgspot_img
spot_imgspot_img

ಕುಂದಾಪುರ: ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ!!

- Advertisement -
- Advertisement -
vtv vitla
vtv vitla

ಕುಂದಾಪುರ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಹೆಸ್ಕುತ್ತೂರಿನಲ್ಲಿ ಬುಧವಾರ ಸಂಜೆ ನಡೆದಿದೆ.

vtv vitla
vtv vitla

ಆತ್ಮಹತ್ಯೆ ಮಾಡಿಕೊಂಡ ಯುವಕ ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂಬಾತ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು. ಬುಧವಾರ ಸಂಜೆ ಶಿರಿಯಾರ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಹಾರ್ಯಾಡಿ ಬಳಿಯ ಮನೆಗೆ ತೆರಳಿ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!