- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ (ರಿ) ಇದರ ಕುಲಾಲ ಸಮ್ಮಿಲನ, ಪದಗ್ರಹಣ, ಸನ್ಮಾನ, ಅಭಿನಂದನೆ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭಾಗಿಯಾದರು.

ಮಂಗಳೂರಿನ ಶ್ರೀ ವೀರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಧಾಮ ಮಾಣಿಲದ ಪರಮ ಪೂಜ್ಯನೀಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆರ್ಶೀವಚನ ನೀಡಿದರು. ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ, ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಸಹಿತ ಅತಿಥಿ ಗಣ್ಯರು, ಪದಾಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.



- Advertisement -








