Thursday, February 2, 2023
spot_imgspot_img
spot_imgspot_img

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ; ಯುವಕ ಅರೆಸ್ಟ್‌

- Advertisement -G L Acharya G L Acharya
- Advertisement -

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಟ್ವಿಟರ್​ನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ 20 ವರ್ಷದ ವ್ಯಕ್ತಿಯೋರ್ವ ಟ್ವೀಟ್ ಮಾಡಿ ಬೆದರಿಕೆ ಹಾಕಿದ್ದ.”ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿ ಮಾಡುತ್ತೇನೆ” ಎಂದು ಟ್ವೀಟ್‌ ಮಾಡಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್‌ಗೂ ಟ್ಯಾಗ್‌ ಮಾಡಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

representative image

ಬೆಂಗಳೂರಿನ ಕೊಡ್ಲು ಗೇಟ್‌ ನಿವಾಸಿ ವೈಭವ್ ಗಣೇಶ್ (20) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ

ರ್ಮಿನಲ್ ಮ್ಯಾನೇಜರ್​ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಈಶಾನ್ಯ ವಿಭಾಗದ ಸಿಇಎನ್ ಹಾಗೂ ದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬೆಂಗಳೂರು ದಿನೇ ದಿನೇ ವಿಶೇಷ ಆವಿಷ್ಕಾರಗಳ ಜೊತೆಯಲ್ಲಿ, ವಿಶೇಷ ಯೋಜನೆಗಳಿಂದಲೂ ಜನರನ್ನು ಆಕರ್ಷಿಸುತ್ತಿದೆ. ಅಲ್ಲದೇ ಈ ಬಾರಿ ದೇಶದಲ್ಲೆ ಮೊದಲ‌ ಬಾರಿಗೆ ವಿಶೇಷ ಚೇತನರಿಗಾಗಿ ಜಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಮಾಡುವ ವಿಶೇಷ ಚೇತನ ಪ್ರಯಾಣಿಕರಿಗೆ ವಿಶೇಷ ಚೇತನರಿಗೆ ಪ್ರತ್ಯೇಕ ಸಿಬ್ಬಂದಿ ಮತ್ತು ಸಾಲಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ವಿಮಾನದಲ್ಲಿ ಒಂಟಿಯಾಗಿ ಪ್ರಯಾಣ ಮಾಡಲು ಹಿಂಜರಿಯುತ್ತಿದ್ದ ವಿಶೇಷ ಚೇತನರು ಇನ್ನು‌ ಮುಂದೆ ಯಾವುದೇ ಅಳುಕಿಲ್ಲದೆ, ಭಯವಿಲ್ಲದೆ ಒಬ್ಬರೇ ಪ್ರಯಾಣ ಮಾಡಬಹುದಾಗಿದೆ.

- Advertisement -

Related news

error: Content is protected !!