Thursday, August 6, 2026
spot_imgspot_img
spot_imgspot_img

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 25 ಲ್ಯಾಪ್​ಟಾಪ್ ಕಳ್ಳತನ; ​ಆರೋಪಿ ಪೊಲೀಸ್ ವಶಕ್ಕೆ..!!

- Advertisement -
- Advertisement -
vtv vitla

ಬೆಂಗಳೂರು: ಲ್ಯಾಪ್​​​​ ಟಾಪ್​ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡ್ತಿದ್ದ ವ್ಯಕ್ತಿಯೋರ್ವನು ಲ್ಯಾಪ್‌ಟಾಪ್ ಕಳ್ಳತನ ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಹಾರಾಷ್ಟ್ರ ಮೂಲದ ಸುಮೀತ್ ಸಿಂಗ್(30) ಎಂದು ಗುರುತಿಸಲಾಗಿದೆ.

ಅಂಗಡಿ ಹಾಗೂ ಗೋದಾಮುಗಳಲ್ಲಿ ಇದ್ದ ಲ್ಯಾಪ್​ಟಾಪ್​​​​ ಕಳ್ಳತನ ಮಾಡಿರುವ ಆರೋಪ ಈತನ ಮೇಲಿದೆ. ಕಂಪನಿಯಲ್ಲಿನ ಸಿಸಿಟಿವಿ ಪರಿಶೀಲಿಸಿದಾಗ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಮೀತ್​​​ ಲ್ಯಾಪ್​ ಟಾಪ್​​ ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

vtv vitla
vtv vitla

ಕಂಪನಿಯಲ್ಲಿ ಲ್ಯಾಪ್​ಟಾಪ್​ ಕಳ್ಳತನವಾಗಿರುವ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.ಇನ್ಸ್​ಪೆಕ್ಟರ್​ ಪ್ರಶಾಂತ್ ಹಾಗೂ ಸಿಬ್ಬಂದಿ ಆರೋಪಿಯ ಮಾಹಿತಿ ಕಲೆ ಹಾಕಿ ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡಿಕೊಂಡಿದ್ದು, ಕಳೆದ ಮೂರು ತಿಂಗಳಿಂದ ಮಾಲೀಕರಿಗೆ ಗೊತ್ತಾಗದಂತೆ ಲ್ಯಾಪ್​ಟಾಪ್​ ಕಳತನ ಮಾಡಿ, ಸ್ನೇಹಿತರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾನೆ. ಹಲವು ಲ್ಯಾಪ್​ಟಾಪ್​ ಆತನ ರೂಮ್​ನಲ್ಲೇ ಇಟ್ಟುಕೊಂಡಿದ್ದನು ಎಂದು ಹೇಳಿದ್ದಾರೆ. ಆರೋಪಿ ನೀಡಿದ ಮಾಹಿತಿ ಮೇರೆಗೆ 6.25 ಲಕ್ಷ ರೂ ಬೆಲೆಯ 25 ಲ್ಯಾಪ್​ಟಾಪ್​ ವಶಪಡಿಸಿಕೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!