- Advertisement -




- Advertisement -
ಚಾಮರಾಜನಗರ: ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಮನು(22) ಎನ್ನಲಾಗಿದೆ.
ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಯುವಕನಿಗೆ ಅಲೆದಾಡಿದರೂ ಯಾವುದೇ ನೌಕರಿ ಸಿಕ್ಕಿರಲಿಲ್ಲ.ಇದರಿಂದ ಖಿನ್ನತೆಗೆ ಒಳಗಾಗಿದ್ದ ಆತ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಘಟನೆ ಬಗ್ಗೆ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -