Saturday, June 22, 2024
spot_imgspot_img
spot_imgspot_img

ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ; 6 ಮಂದಿ ದುರ್ಮರಣ

- Advertisement -G L Acharya panikkar
- Advertisement -

ನವದೆಹಲಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರುದ್ರಪ್ರಯಾಗದಿಂದ 2 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ದಟ್ಟವಾದ ಮಂಜು ಕವಿದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.

ಈ ವಿಷಯದಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

vtv vitla
- Advertisement -

Related news

error: Content is protected !!