ಕ್ಲಬ್ ಹೌಸ್ ಅಪ್ಲಿಕೇಶನ್ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ 19 ವರ್ಷದ ಯುವಕನನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣ ಸಂಬಂಧ ಪೊಲೀಸರಿಗೆ ಕೆಲವು ತಾಂತ್ರಿಕ ಪುರಾವೆಗಳು ದೊರೆತ ಹಿನ್ನೆಲೆಯಲ್ಲಿ 19 ವರ್ಷದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದೇ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ. ಇದಕ್ಕೂ ಮೊದಲು ದೆಹಲಿ ಪೊಲೀಸರ ಗುಪ್ತಚರ ಇಲಾಖೆ ಹಾಗೂ ಸ್ಟ್ರಾಟೆಜಿಕ್ ಆಪರೇಷನ್ಸ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಕ್ಲಬ್ ಹೌಸ್ನಲ್ಲಿ ನಡೆದ ಸಂಭಾಷಣೆಗಳಲ್ಲಿ ಜನರ ಗುಂಪು ಅಶ್ಲೀಲವಾಗಿ ಕಮೆಂಟ್ ಮಾಡುತ್ತಿರುವುದು ಕಂಡು ಬಂದಿದೆ. ಹಿಂದೂ ಹುಡುಗಿಯರಿಗಿಂತ ಮುಸ್ಲಿಂ ಹುಡುಗಿಯರು ಹೆಚ್ಚು ಸುಂದರವಾಗಿ ಇರುತ್ತಾರೆ ಎಂಬ ಶೀರ್ಷಿಕೆಯ ಅಡಿಯಲ್ಲಿ ನಡೆದ ಕ್ಲಬ್ಹೌಸ್ ಚರ್ಚೆಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ ಹೇಳಿಕೆಗಳನ್ನು ನೀಡಲಾಗಿತ್ತು ಎನ್ನಲಾಗಿದೆ. ಮಹತ್ವದ ಸಂಗತಿಯೆಂದರೆ ಈ ಬಳಕೆದಾರ ನಕಲಿ ಹೆಸರಿನಲ್ಲಿ ತನ್ನ ಖಾತೆ ನಿರ್ವಹಿಸುತ್ತಿದ್ದರೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.