Sunday, July 26, 2026
spot_imgspot_img
spot_imgspot_img

ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ; ವಾಹನ ಸಂಚಾರಕ್ಕೆ ನಿರ್ಬಂಧ

- Advertisement -
- Advertisement -

ಮೈಸೂರು: ಮೈಸೂರಿನಲ್ಲಿ ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದ್ದು, ಪ್ರವಾಸಿಗರು ಮತ್ತು ಭಕ್ತರು ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಲಾಗಿದೆ.

ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ಇನ್ನು ಮೈಸೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

- Advertisement -

Related news

error: Content is protected !!