- Advertisement -
- Advertisement -

ಬೆಳ್ತಂಗಡಿ /ಮೂಡಿಗೆರೆ: ಚಾರ್ಮಾಡಿ ಘಾಟ್ ನ ಮಲಯ ಮಾರುತ ಎಂಬಲ್ಲಿ ಕಾರೊಂದು ಬೆಂಕಿಯಿಂದ ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ.

ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹೇಂದ್ರ ಲೋಗನ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.


- Advertisement -








