Thursday, July 30, 2026
spot_imgspot_img
spot_imgspot_img

ಚುನಾವಣೆ ಜಯಭೇರಿ ಬಳಿಕ ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

- Advertisement -
- Advertisement -

ಗಾಂಧಿನಗರ: ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ತಾಯಿ ಹೀರಾಬೆನ್‌ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಜಯ ಗಳಿದ ಹಿನ್ನಲೆಯಲ್ಲಿ ತವರು ರಾಜ್ಯ ಗುಜರಾತ್ ಗೆ ತೆರಳಿ ಅಹ್ಮದಾಬಾದ್​ ಏರ್​​ಪೋರ್ಟ್​​ನಿಂದ ಗಾಂಧಿನಗರದಲ್ಲಿರುವ ಕಮಲಂ ಬಿಜೆಪಿ ಪ್ರಧಾನ ಕಚೇರಿಯವರೆಗೆ ರೋಡ್​ ಶೋ ನಡೆಸಿದ ಬಳಿಕ ಸಂಜೆ ವೇಳೆ ಗುಜರಾತ್‌ನ ಗಾಂಧಿನಗರದಲ್ಲಿರುವ ನಿವಾಸಕ್ಕೆ ತೆರಳಿ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿದ್ದಾರೆ.

ತಾಯಿಯ ಆರೋಗ್ಯ ವಿಚಾರಿಸಿದ ಪ್ರಧಾನಿ ಒಟ್ಟಿಗೆ ಕುಳಿತು ಊಟ ಮಾಡುವ ಹಾಗೂ ಯೋಗಕ್ಷೇಮ ವಿಚಾರಿಸುವ ಮೂಲಕ ಒಂದಷ್ಟು ಸಮಯವನ್ನು ತಾಯಿ ಜತೆ ಕಳೆದಿದ್ದಾರೆ. ಮೋದಿ ಅವರು ತಮ್ಮ ತಾಯಿಯನ್ನು ಭೇಟಿಯಾದ ಫೋಟೊಗಳು ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಎರಡು ದಿನಗಳ ಭೇಟಿಗಾಗಿ ಮೋದಿ ಪ್ರಸ್ತುತ ತವರು ರಾಜ್ಯದಲ್ಲಿರಲಿದ್ದು, ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

- Advertisement -

Related news

error: Content is protected !!