Friday, August 28, 2026
spot_imgspot_img
spot_imgspot_img

ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ; ದಂಪತಿ ಸಾವು, 9 ಮಂದಿಗೆ ಗಾಯ

- Advertisement -
- Advertisement -

ಟ್ರ್ಯಾಕ್ಟರ್ಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾ.ಹೆದ್ದಾರಿ 50ರಲ್ಲಿ ನಡೆದಿದೆ. ಪತಿ ಭಯ್ಯಾಜಿ ಶಿಂಧೆ(50), ಪತ್ನಿ ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮೃತ ದಂಪತಿ ಬೆಳಗಾವಿ ಜಿಲ್ಲೆ ಅಥಣಿ ಮೂಲದ ನಿವಾಸಿಗಳು. ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್ ಗೆ ಮಹಾರಾಷ್ಟ್ರದ ಅಕ್ಕಲಕೋಟಗೆ ತೆರಳುತ್ತಿದ್ದ ಕ್ರೂಸರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಘಟನೆ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ ಒಂಬತ್ತು ಜನರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಥಣಿ ಮೂಲದ ಇವರೆಲ್ಲಾ ಕ್ರೂಸರ್ ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!