Friday, May 20, 2022
spot_imgspot_img
spot_imgspot_img

ಡಿವೈಡರ್’ಗೆ ಡಿಕ್ಕಿ ಹೊಡೆದ ಕಾರು; 7 ಮಂದಿ ದುರ್ಮರಣ

- Advertisement -
suvarna gold
vtv vitla
vtv vitla
- Advertisement -

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳಾದ ಮಲ್ಲನ ಗೌಡ (22) ,ಸಂತೋಷ (21), ಸಂಜೀವ್ (20), ಜೈಬೀಮ್ (18 ) ,ರಾಘು (23) ,ಸಿದ್ದೇಶ್( 20), ವೇದಮೂರ್ತಿ (18) ಎನ್ನಲಾಗಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದಾವಣಗೆರೆ ಎಸ್‌ಪಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!