- Advertisement -
- Advertisement -
ಬೆಂಗಳೂರು: ಇಂದು ಬೆಳಗ್ಗೆ 11ಕ್ಕೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡುವಂತೆ ನಟ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ರವರಿಗೆ ಸಿಸಿಬಿ ಸೂಚಿಸಿದೆ.

ಸ್ಯಾಂಡಲ್ವುಡ್ನ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ.

ಈ ಕುರಿತು ನನ್ನ ಬಳಿ ಮಾಹಿತಿ ಇದೆ ಎಂದು ಕಳೆದ ಆಗಸ್ಟ್ನಲ್ಲಿ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಇಂದ್ರಜಿತ್ ಲಂಕೇಶ್ ಅವರನ್ನು ಹಿಂದೊಮ್ಮೆ ಸಿಸಿಬಿ ವಿಚಾರಣೆಗೊಳಪಡಿಸಿತ್ತು.

ಹಲವು ತಿಂಗಳುಗಳ ಕಾಲ ಪರಪ್ಪನ ಅಗ್ರಹಾರದಲ್ಲಿದ್ದ ನಟಿ ಸಂಜನಾ ಮತ್ತು ನಟಿ ರಾಗಿಣಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಇಂದ್ರಜಿತ್ ರವರನ್ನು ಸಿಸಿಬಿ ವಿಚಾರಣೆಗೆ ಕರೆದಿದ್ದಾರೆ.


- Advertisement -








