Wednesday, September 2, 2026
spot_imgspot_img
spot_imgspot_img

ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯಿಂದ ಮಹಿಳೆಯ ಘೋರ ಹತ್ಯೆ!

- Advertisement -
- Advertisement -
driving

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿ ಗಂಗಪ್ಪ ಅಳ್ಳಳ್ಳಿ ಎನ್ನಲಾಗಿದೆ.

23 ವರ್ಷದ ಬಾಲಮ್ಮ ಎಂಬ ವಿವಾಹಿತ ಮಹಿಳೆ ಮೇಲೆ ದುಷ್ಕರ್ಮಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗಂಗಪ್ಪ ಅಳ್ಳಳ್ಳಿ ಎಂಬಾತ ಈ ಕೃತ್ಯವೆಸಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

- Advertisement -

Related news

error: Content is protected !!