Tuesday, May 30, 2023
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

- Advertisement -G L Acharya
- Advertisement -

ಕಲಬುರಗಿ : ಹೊಲದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಡ್ರಾಮಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಹರನಾಳ (ಬಿ) ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಅನುಸೂಯ ಬಾಯಿ (40) ಕೊಲೆಯಾದ ಮಹಿಳೆ. ಜಮೀನಿನಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿ ಮೈಮೇಲಿನ ಚಿನ್ನಾಭರಣ ದೋಚಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಯಡ್ರಾಮಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಜಮೀನಿನಲ್ಲಿ ಕೆಲಸ ಮಾಡುವ ಮಹಿಳೆಯರಲ್ಲಿ ಭಯ ಸೃಷ್ಟಿಯಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ ವ್ಯಕ್ತವಾಗಿದೆ.

- Advertisement -

Related news

error: Content is protected !!