Monday, June 22, 2026
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

- Advertisement -
- Advertisement -

ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ KSRTC ಬಸ್ ನಿಲ್ದಾಣ ಸಮೀಪ ನಡೆದಿದೆ. ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪರಶುರಾಮ ಕೃತ್ಯವೆಸಗಿದ ಆರೋಪಿ.

ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ ಪರಶುರಾಮ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

- Advertisement -

Related news

error: Content is protected !!