Sunday, June 29, 2025
spot_imgspot_img
spot_imgspot_img

ತೋಟದ ಮನೆಯಲ್ಲಿ ವೇಶ್ಯಾವಾಟಿಕೆ; ಪೊಲೀಸರ ದಾಳಿ- ಇಬ್ಬರು ಅಂದರ್.! 28, 22 ವರ್ಷದ ಯುವತಿಯರ ಹಾಗೂ 38 ವರ್ಷದ ಮಹಿಳೆಯ ರಕ್ಷಣೆ

- Advertisement -
- Advertisement -
vtv vitla

ಶಿವಮೊಗ್ಗ: ವೇಶ್ಯಾವಾಟಿಕೆ ಅಡ್ಡ ಮೇಲೆ ಮಹಿಳಾ ಠಾಣೆಯ ಪೋಲಿಸರು ದಾಳಿ ಮಾಡಿ ವೃದ್ಧ ಸೇರಿ ಇಬ್ಬರ ಬಂಧಿಸಿ ಮೂವರು ಮಹಿಳೆಯರನ್ನ ರಕ್ಷಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯದಲ್ಲಿ ನಡೆದಿದೆ ಬಂಧಿತರನ್ನ ದುರ್ಗಿಗುಡಿ ಕೆ.ಎಚ್.ಶಂಕರ್ ಮತ್ತು ಭೋಜಪ್ಪ ಕ್ಯಾಂಪ್‌ನ ಮುನಿಯಪ್ಪ ಎಂದು ಗುರುತಿಸಲಾಗಿದೆ.

ಸೊಗಾನ ಬಳಿಯಿರುವ ಭೋಜಪ್ಪ ಕ್ಯಾಂಪ್‌ನ ತೋಟದ ಮನೆಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆಯನ್ನು ಮಾಡಿದ್ದಾರೆ. ದಾಳಿ ವೇಳೆ ಬೆಂಗಳೂರಿನ 38 ವರ್ಷದ ಮಹಿಳೆ, ತೀರ್ಥಹಳ್ಳಿಯ 28 ವರ್ಷದ ಯುವತಿ ಹಾಗೂ ಕುಂದಾಪುರ ತಾಲೂಕಿನ 22 ವರ್ಷದ ಯುವತಿಯನ್ನ ರಕ್ಷಣೆ ಮಾಡಲಾಗಿದೆ.

ಮಹಿಳಾ ಠಾಣೆ ಇನ್‌ಸ್ಪೆಕ್ಟರ್ ವೀರೇಶ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಪೊಲೀಸರು ಒಂದು ಬೈಕ್‌ನ್ನು ಜಪ್ತಿ ಮಾಡಿದ್ದಾರೆ. ಈ ಸಂಬ0ಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suvarna gold
- Advertisement -

Related news

error: Content is protected !!