Thursday, July 30, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

- Advertisement -
- Advertisement -

ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಸೆ.12ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

Related news

error: Content is protected !!