Thursday, June 1, 2023
spot_imgspot_img
spot_imgspot_img

ದೂರುದಾರನಿಗೆ ತನ್ನ ಕಾರನ್ನೇ ನೀಡಿ PSI ಎದೆಯಲ್ಲಿ ನಡುಕು ಉಂಟಾಗುವ0ತೆ ಮಾಡಿದ SP.!

- Advertisement -G L Acharya
- Advertisement -

ತುರುವೇಕೆರೆ: ಆರೋಪಿಯನ್ನು ಹಿಡಿಯಲು ದೂರುದಾರನಿಗೆ ತುಮಕೂರು ಜಿಲ್ಲಾ ಎಸ್ಪಿ ತನ್ನ ಕಾರನ್ನೇ ಕೊಟ್ಟಿರುವ ಪ್ರಕರಣ ಎಲ್ಲೆಡೆ ಚರ್ಚೆಯಾಗುತ್ತಿದೆ. ಇದೀಗ ಪ್ರಕರಣ ಅಂತ್ಯ ಕಂಡಿದ್ದು, ಎಸ್‌ಪಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕಳೆದ ೩-೪ ತಿಂಗಳ ಹಿಂದೆ ಆರೋಪಿಯ ಬಗ್ಗೆ ದೂರು ದಾಖಲಾಗಿದ್ದರೂ ಪಿ.ಎಸ್.ಐ ಆರೋಪಿಯನ್ನು ಬಂಧಿಸಿರಲಿಲ್ಲ. ದೂರುದಾರರಿಗೆ ನಿತ್ಯ ಠಾಣೆಗೆ ಅಲೆದು ಅಲೆದು ಸಾಕಾಗಿತ್ತು. “ಸರ್ ಆರೋಪಿ ಅಲ್ಲೇ ಇದ್ದಾನೆ ಬನ್ನಿ ಅರೆಸ್ಟ್ ಮಾಡಿ” ಅಂದರೂ ಆರೋಪಿಯನ್ನು ಕರೆತರಲು ಬಾಡಿಗೆ ಕಾರು ತನ್ನಿ ಎಂದು ಸೂಚಿಸಿದ್ದ ದಂಡಿನಶಿವರ ಠಾಣೆ ಪಿಎಸ್.ಐ ಶಿವಲಿಂಗಯ್ಯಗೆ ಎಸ್ಪಿ ರಾಹುಲ್ ಕುಮಾರ್ ಕೊಟ್ಟ ಶಾಕ್ ಅಷ್ಟಿಷ್ಟಲ್ಲ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಠಾಣಾವ್ಯಾ ಪ್ತಿಯ ಕೋಡಿಹಳ್ಳಿಯಲ್ಲಿ ನಡೆದಿರುವ ಜಮೀನು ವಿವಾದಕ್ಕೆ ಸಂಬ0ಧಿಸಿದ0ತೆ ನಾಗೇಂದ್ರಪ್ಪ ಹಾಗೂ ನೆರೆಹೊರೆಯ ಶಿವಪ್ರಕಾಶ್ ಮತ್ತು ಆತನ ಪುತ್ರ ಚಂದನ್ ಮಧ್ಯೆ ಜಗಳವಾಗಿತ್ತು. ಈ ವೇಳೆ ನಾಗೇಂದ್ರಪ್ಪ ಹಾಗೂ ಅವರ ಪತ್ನಿ ಶಿವಮ್ಮಗೆ ಚಂದನ್ ಮತ್ತು ಶಿವಪ್ರಕಾಶ್ ಹಿಗ್ಗಾಮುಗ್ಗಾ ಹಲ್ಲೆಗೈದಿದ್ದರಂತೆ. ಪರಿಣಾಮ ನಾಗೇಂದ್ರಪ್ಪ ಹಾಗೂ ಶಿವಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಇದು ಮಾರಣಾಂತಿಕ ಹಲ್ಲೆ ಎಂದು ವರದಿ ನೀಡಿದ್ದಾರೆ. ಇದನ್ನು ಪಡೆದಿರುವ ನಾಗೇಂದ್ರಪ್ಪ ದಂಡಿನಶಿವರ ಪೊಲೀಸ್ ಠಾಣೆಗೆ ಕೊಲೆಯತ್ನ ಕೇಸ್ ನೀಡಿದ್ದರು. ಆದರೆ ಆರೋಪಿಗಳನ್ನು ಬಂಧಿಸದೆ ಪಿಎಸ್.ಐ ನಿರ್ಲಕ್ಷ್ಯವಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಹೀಗಾಗಿ ಆರೋಪಿಯನ್ನು ಬಂಧಿಸುವ0ತೆ ನಾಗೇಂದ್ರಪ್ಪ ಠಾಣೆಗೆ ಬಂದು ಪಿಎ.ಐ ಬಳಿ ಮನವಿ ಮಾಡಿಕೊಂಡಾಗ, ಆರೋಪಿಯನ್ನು ಬಂಧಿಸೋಣ. ಅದಕ್ಕಾಗಿ ನೀನೊಂದು ಬಾಡಿಗೆ ವಾಹನ ಮಾಡಿಕೊಂಡು ಬಾ ಎಂದು ಪಿಎಸ್.ಐ ಶಿವಲಿಂಗಯ್ಯ ಹೇಳಿದ್ದಾರೆ ಎನ್ನ ಲಾಗಿದೆ. ತನಿಖೆಗೆ ಆಗ್ರಹಿಸಿ ಪದೇಪದೆ ಠಾಣೆಗೆ ಭೇಟಿ ನೀಡುತ್ತಿದ್ದ ನಾಗೇಂದ್ರಪ್ಪ ಪಿಎಸ್.ಐ ವರ್ತನೆಯಿಂದ ರೋಸಿಹೋಗಿ ತುಮಕೂರಿಗೆ ಬಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಅವರನ್ನು ಭೇಟಿಯಾಗಿ ಕಣ್ಣೀರಿಟ್ಟಿದ್ದರು.

ಘಟನೆ ಬಗ್ಗೆ ತಿಳಿದು ಕೆಂಡಾಮ0ಡಲರಾದ ಎಸ್ಪಿ ಸ್ವತಃ ತಮ್ಮ ಕಾರಿನಲ್ಲೇ ನಾಗೇಂದ್ರಪ್ಪ ಮತ್ತು ಅವರ ಕಡೆಯವರನ್ನು ಕುಳಿತುಕೊಳ್ಳುವಂತೆ ಹೇಳಿ ತಮ್ಮ ಕಾರುಚಾಲಕನನ್ನು ಕರೆದು ಇವರನ್ನು ಸೀದಾ ದಂಡಿನಶಿವರ ಪೊಲೀಸ್ ಠಾಣೆಗೆ ಬಿಟ್ಟು ಬಾ ಎಂದಿದ್ದಾರೆ. ಕಾರು ಬಂದಿದೆ ಆರೋಪಿಯನ್ನು ಬಂಧಿಸುವ0ತೆ ಪಿಎಸ್.ಐ ಅವರನ್ನು ಕೇಳಿ ಎಂದು ನಾಗೇಂದ್ರಪ್ಪಗೆ ಹೇಳಿ ಕಳುಹಿಸಿದ್ದರು. ಪೊಲೀಸ್ ಠಾಣೆಯ ಮುಂದೆ ಕಾರು ಕಂಡೊಡನೆ ದಂಗಾದ ದಂಡಿನಶಿವರ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ನಿಂತಲ್ಲಿಯೇ ಬೆವತುಹೋಗಿದ್ದಾರೆ. ಅಷ್ಟೇ ಅಲ್ಲದೆ ಶಿವಲಿಂಗಯ್ಯಗೆ ದೂರವಾಣಿ ಕರೆಮಾಡಿದ ಎಸ್ಪಿ ರಾಹುಲ್, ಆರೋಪಿ ಎಲ್ಲೇಇದ್ದರೂ ನಾಳೆ ಬೆಳಗಾಗುವಷ್ಟರಲ್ಲಿ ಬಂಧಿಸಬೇಕು ಎಂದು ವಾರ್ನಿಂಗ್ ಮಾಡಿದ್ದಾರೆ. ಇದಾದ ಮರುದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಎಸ್ಪಿ ಅವರ ಕರ್ತವ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.

vtv vitla
suvarna gold
- Advertisement -

Related news

error: Content is protected !!