- Advertisement -
- Advertisement -
ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ನಡೆದಿದೆ.
ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 30 ಮಂದಿ ಸಾವನ್ನಪ್ಪಿ ,80 ಮಂದಿ ಗಾಯಗೊಂಡಿದ್ದಾರೆ. ಇಸ್ಲಾಮಾಬಾದ್‌ನ ಪಶ್ಚಿಮಕ್ಕೆ ಸುಮಾರು 190 ಕಿಲೋಮೀಟರ್ ದೂರದಲ್ಲಿರುವ ಪೇಶಾವರದ ಕೊಚಾ ರಿಸಾಲ್ದಾರ್ ಪ್ರದೇಶದಲ್ಲಿ ಶುಕ್ರವಾರದ ಪ್ರಾರ್ಥನೆಯ ಕೆಲವೇ ಕ್ಷಣಗಳ ಮೊದಲು ಅತ್ಮಾಹುತಿ ಬಾಂಬ್ ದಾಳಿ ನಡೆದಿದೆ.
ಶಿಯಾ ಮಸೀದಿಗೆ ಇಬ್ಬರು ಶಸ್ತ್ರಾಸ್ತ್ರ ದಾರಿಗಳು ಪ್ರವೇಶಿಸಿ ಗುಂಡಿನ ದಾಳಿ ನಡೆಸಿ ಮಸೀದಿ ಪ್ರವೇಶ ಮಾಡಿದ್ದು ಬಳಿಕ ಸ್ವಯಂ ಸ್ಪೋಟಿಸಿರುವ ಬಗ್ಗೆ ವರದಿಯಾಗಿದೆ.
- Advertisement -